ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಐವರು ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತಿಗಳರ ಪಾಳ್ಯದ ಮನೆಯೊಂದರಲ್ಲಿ ಕುಟುಂಬ ವಾಸವಿದ್ದು, ತಾಯಿ ಮಕ್ಕಳೆಲ್ಲಾ ಒಂದೇ ಸಲ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ.
ಸ್ಥಳೀಯರ ಮಾಹಿತಿ ಆಧರಿಸಿ ಗಸ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನು? ಕುಟುಂಬದ ವಿವರಗಳೇನು ಎಂದು ಇನ್ನೂ ತನಿಖೆಯಲ್ಲಿ ಬಯಲಾಗಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

























Discussion about this post