ಚಿಕ್ಕಮಗಳೂರು : ತೋಟ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಅ.೧೧ ರಂದು ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಏಕಕಾಲದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್ ಚಿಕ್ಕಮಗಳೂರು ಘಟಕದ ಉಪಾಧ್ಯಕ್ಷ ಬಿ.ಅಮ್ಜದ್ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಫಿ, ಟೀ, ರಬ್ಬರ್ ಸೇರಿದಂತೆ ಪ್ಲಾಂಟೇಷನ್ ಉದ್ಯಮ ಎದುರಿಸುತ್ತಿರುವರು ಹಾಗೂ ತೋಟ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವAತೆ ಆಗ್ರಹಿಸಿ ಚಿಕ್ಕಮಗಳೂರು, ಹಾಸನ, ಕೊಡಗಿನ ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಪ್ರಾಕೃತಿಕ ವಿಕೋಪ, ಔಷಧಿ, ರಸಗೊಬ್ಬರ ಏರಿಕೆ, ಬೆಳೆಹಾನಿಯಾಗಿ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಬೆಲೆ ಏರಿಕೆಯಿಂದಾಗಿ ಕಾರ್ಮಿಕರಿಗೂ ಮೂಲಭೂತ ಸವಲತ್ತು ಒದಗಿಸುವುದು ಕಷ್ಟದಾಯವಾಗಿದೆ. ಈ ನಿಟ್ಟಿನಲ್ಲಿ ಸಂಕಷ್ಟದಲ್ಲಿರುವ ಕಾಫಿ ಉದ್ಯಮಕ್ಕೆ ಬೆಂಬಲ ಬೆಲೆ ನೀಡಬೇಕು, ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಬೇಕು, ಕಾರ್ಮಿಕರಿಗೆ ಕನಿಷ್ಟ ವೇತನ ಹೆಚ್ಚಳಮಾಡಬೇಕು ಈ ನಿಟ್ಟಿನಲ್ಲಿ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿದರು.
ಮಲೆನಾಡು ಭಾಗದಲ್ಲಿ ವನ್ಯಜೀವಿಗಳ, ರೈತರ ಜಮೀನುಗಳಿಗೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡುವುದರ ಜೊತೆಗೆ ಪ್ರಾಣ ಹಾನಿಗೂ ಕಾರಣವಾಗಿವೆ, ಇದನ್ನು ತಪ್ಪಿಸುವಲ್ಲಿ ಸಂಬAಧಿಸಿದ ಇಲಾಖೆ ಯಾವುದೇ ಕ್ರಮಗೊಂಡಿಲ್ಲ, ಪ್ರಾಣ ಹಾನಿ ಸಂಭವಿಸಿದ್ದಲ್ಲಿ ನೀಡುವ ಪರಿಹಾರ ಮೊತ್ತವನ್ನು ೭ ರಿಂದ ೨೫ ಲಕ್ಷಕ್ಕೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿಗೊಳಿಸಿ ಜಾರಿ ಮಾಡಲು ಮುಂದಾಗಿರುವುದರಿAದ ಶೇ ೮೦ ರಷ್ಟು ಕಾರ್ಮಿಕರು ಕಾನೂನು ಬದ್ದ ಸವಲತ್ತುಗಳಿಂದ ವಂಚಿತರಾಗಲಿದ್ದಾರೆ. ಕಾರ್ಮಿಕಕ ವಿರೋಧಿ ಕಾಯ್ದೆಗಳನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಜತೆಗೆ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದರ ಏರಿಕೆಯಿಂದಾಗಿ ಜನಸಾಮಾನ್ಯರ ಮೇಲೆ ಗಾಢ ಪರಿಣಾಮ ಬೀರಿದ್ದು ಕೂಡಲೇ ಬೆಲೆ ಇಳಿಕೆ ಮಾಡುವಂತೆ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅ. ೧೧ ರಂದು ಬೃಹತ್ ಪ್ರತಿಭಟನೆಯು ಬೆಳಗ್ಗೆ ೧೧ ಗಂಟೆಗೆ ನಗರದ ಸಿಪಿಐ ಕಛೇರಿಯಿಂದ ಆಜಾದ್ ಪಾಕ್ ವೃತ್ತದವರೆಗೂ ಪ್ರತಿಭಟನೆ ಮೆರವಣಿಗೆ ಸಾಗಲಿದೆ. ಕೊಡಗು, ಹಾಸನ ಜಿಲ್ಲೆಯಲ್ಲೂ ಏಕಕಾಲದಲ್ಲಿ ಧರಣಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್ ಚಿಕ್ಕಮಗಳೂರು ಘಟಕದ ಪ್ರಧಾನ ಕಾರ್ಯದರ್ಶಿ ಗುಣಶೇಖರ್ ಇದ್ದರು.
Discussion about this post