ಫ್ರೀಡಂ ರನ್ ಗೆ ಶೋಭಾ ಕರಂದ್ಲಾಜೆ ಚಾಲನೆ
ಉಡುಪಿ: ಜಿಲ್ಲೆಯಲ್ಲಿ ನಡೆದ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫ್ರೀಡಂ ರನ್ಗೆ (Freedom Run) ಚಾಲನೆ ನೀಡಿದರು.
ನಗರದ ಮಹಾತ್ಮ ಗಾಂಧಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವು ನೆಹರು ಯುವ ಕೇಂದ್ರ, ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಎನ್ಸಿಸಿ, ಎನ್ಎಸ್ಎಸ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್ಕ್ರಾಸ್, ಉಡುಪಿಯ ಕೆನರ ಬ್ಯಾಂಕ್ ಸರ್ಕಲ್ ಆಫೀಸ್ ಸಹಯೋಗದೊಂದಿಗೆ ನಡೆಯಿತು.
ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳಿಂದ ಪಿಟ್ ಇಂಡಿಯಾ (Fit India) ಓಟ ನಡೆಯಿತು. ವಿದ್ಯಾರ್ಥಿಗಳ ಜೊತೆ ಓಟದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಇದೇ ವೇಳೆ ಮಾತನಾಡಿದ ಶೋಭಾ ಕರಂದ್ಲಾಜೆ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಹಿರಿಯರು ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ನಾವೆಲ್ಲರೂ ಕೈಜೋಡಿಸೋಣ. ಭಾರತವನ್ನು ಸದೃಢ ಮಾಡುವ ಅವಕಾಶ ನಮ್ಮ ಕೈಯಲ್ಲಿದೆ. ವಿದ್ಯಾರ್ಥಿಗಳು ೨೫ ವರ್ಷದ ಮುಂದಿನ ಕನಸು ಕಾಣಬೇಕು. ಭಾರತವನ್ನು ವಿಶ್ವದಲ್ಲೇ ನಂಬರ್ ೧ ಸ್ಥಾನಕ್ಕೆ ಏರಿಸಬೇಕು ಎಂದು ತಿಳಿಸಿದರು.

























Discussion about this post