ಬೆಂಗಳೂರು: ರಾಜದಾನಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ತಮ್ಮ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಧಾರವಾಡ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರಗತಿ ಸಾಧಿಸಿದೆ, ಹೆಚ್ಚಿನ ಸ್ಥಾನ ಗೆದ್ದಿದೆ. ಜನರ ತೀರ್ಪಿಗೆ ಸ್ವಾಗತ ಎಂದು ಹೇಳಿದ್ದಾರೆ. ಆಯಾ ಜಿಲ್ಲೆಗಳ ಬಿಜೆಪಿ ನಾಯಕರು, ಕಾರ್ಯಕರ್ತರು, ಪಕ್ಷದ ಅಭಿಮಾನಿಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದು, ಅವರೆಲ್ಲಾ ಶ್ರಮದಿಂದ ಗೆದ್ದಿದ್ದಾರೆ ಎಂದು ಶಹಬ್ಬಾಷ್ ಗಿರಿ ಹೇಳಿದ್ದಾರೆ.
ಹಿರಿಯ ನಾಯಕರ ಪರ ಕಾರ್ಯಕರ್ತರಿಗೆ, ಮಂತ್ರಿಗಳಿಗೆ ಪ್ರಚಾರ ಮಾಡಿದ ನಳೀನ್ ಕುಮಾರ್ ಕಟೀಲ್, ರವಿಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಮತದಾರರು ನಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿದ್ದಾರೆ ಎಂದು ಸಹ ಅವರು ಹೇಳಿದ್ದಾರೆ

























Discussion about this post