ಬಾಗಲಕೋಟೆ:: ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಆಸೆಯನ್ನ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಸಿದ್ದುಶ್ರೀ ಉತ್ಸವದಲ್ಲಿ ಮಾತನಾಡಿದ ಜಕನೂರು ಮಾಧವಲಿಂಗಶ್ರೀ ಅವರು, ಸಿದ್ಧರಾಮಯ್ಯ ಅವರಿಗೆ ‘ಮತ್ತೆ ಕರ್ನಾಟಕದ ಮುಖ್ಯ ಮಂತ್ರಿಯಾಗಲಿ, ಮತ್ತೆ ರಾಜ್ಯವನ್ನ ಮುನ್ನೆಡೆಸಲಿ’ ಎಂದು ಆಶೀರ್ವಾದ ಮಾಡಿದರು.
ಶ್ರೀಗಳ ಆಶೀರ್ವಾದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಶ್ರೀಗಳು ಆಶೀರ್ವಾದ ಮಾಡಿದ್ದಾರೆ ಎಂದರು. ಶ್ರೀಗಳ ಆಶೀರ್ವಾದದಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ನಾನು ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದರು.

























Discussion about this post