ಚಿಕ್ಕಮಗಳೂರು : ದೇಶದಲ್ಲಿ ಹಲವಾರು ಸ್ವಾತಂತ್ರö್ಯ ಹೋರಾಟಗಾರರು, ಮಹನೀಯರ ತ್ಯಾಗ ಬಲಿದಾನದ ಪ್ರತೀಕವಾಗಿ ಭಾರತ ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆದಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್. ಭೋಜೇಗೌಡ ಹೇಳಿದರು.
ನಗರದ ಕಾಫಿ ಮಂಡಳಿ ಕಛೇರಿಯಲ್ಲಿ ಆಯೋಜಿಸಿದ್ದ ಆಜಾದಿ ಕಾ ಅಮೃತ್ ಮಹೋತ್ಸವ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆ ಹೊಂದಿರುವ ಬೃಹತ್ ರಾಷ್ಟç ಭಾರತ. ದೇಶಕ್ಕೆ ಸ್ವಾತಂತ್ರö್ಯ ಲಭಿಸಲು ಹಲವಾರು ಸ್ವಾತಂತ್ರö್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಬಲಿ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರö್ಯ ಲಭಿಸಿ ೭೫ ವರ್ಷಗಳು ತುಂಬುತ್ತಿರುವ ಹಿನ್ನೆಲೆ ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ ಎಂದರು.
ಹಲವಾರು ಲೋಪ ದೋಷಗಳ ನಡುವೆಯೂ ಭಾರತ ಅಭಿವೃದ್ಧಿ ಪಥದತ್ತ ಸಾಗುತ್ತಿದೆ, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗೆ ವಿಶೇಷ ಯೋಜನೆ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದು ಕೊಂಡಾಡಿದರು.
ಕೋವಿಡ್ ನಿಯಂತ್ರಣದಲ್ಲಿ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳ ಶ್ರಮ ಅಪಾರವಾದುದು. ಹಗಲಿರುಳು ರೋಗಿಗಳ ಚಿಕಿತ್ಸೆ ನೀಡುವ ಮೂಲಕ ಕೊರೊನಾ ನಿಯಂತ್ರಣ ಮಾಡುವಲ್ಲಿ ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.
ಕಾಫಿ ಮಂಡಳಿ ಉಪನಿರ್ದೇಶಕ ಶ್ರೀನಿವಾಸ್ ಮಾತನಾಡಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಾಲಯವು ಸೆ.೨೬ ರಿಂದ ದೇಶದ ೧೦ ಲಕ್ಷ ಕೃಷಿ ಕಾರ್ಮಿಕರಿಗೆ ಗುಣಮಟ್ಟದ ಆಹಾರ ಉತ್ಪಾದನೆ ಕುರಿತು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲು ನಿರ್ದೇಶಿಸಿದೆ. ಅಭಿವೃದ್ಧಿ ಹೊಂದಿದ ರಾಷ್ಟçಗಳ ಸಾಲಿನಲ್ಲಿ ಭಾರತ ಗುರುತಿಸಿಕೊಳ್ಳಬೇಕು, ಕೃಷಿ, ಕೈಗಾರಿಕೆ, ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಬೇಕು ಆ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕೃಷಿ ಒಳಗೊಂಡAತೆ ಸರ್ಕಾರದಿಂದ ಸಿಗುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವುದಾಗಿದೆ ಜತಗೆ ಸ್ವಾತಂತ್ರö್ಯಕ್ಕಾಗಿ ಮಡಿದ ಹೋರಾಟಗಾರರ ಸ್ಮರಿಸುವ ನಿಟ್ಟಿನಲ್ಲಿ ಎಲ್ಲೆಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ನಿವೃತ್ತ ಉಪನ್ಯಾಸಕರಾದ ತಿಪ್ಪೇರುದ್ರಪ್ಪ ಮಾತನಾಡಿ ಭಾರತ ಕೋವಿಡ್ ಲಸಿಕೆಯನ್ನು ಕಂಡು ಹಿಡಿದು ಉತ್ಪಾದನೆ ಮಾಡುವ ಮೂಲಕ ಸ್ವಾವಲಂಬನೆಯ ದೇಶವಾಗಿ ಗುರ್ತಿಸಿಕೊಂಡಿದೆ. ವೈದ್ಯಕೀಯ ಲೋಕದ ಇತಿಹಾಸದಲ್ಲಿ ಈ ಅಧ್ಯನ ಹೊಸ ಕ್ರಾಂತಿ ಸೃಷ್ಟಿಸಿದೆ ಎಂದರು.
ಭಾರತೀಯರನ್ನು ಒಗ್ಗಟ್ಟಾಗಿಸಲು ಗಣೇಶೋತ್ಸವ ಆಚರಣೆ ಮೂಲಕ ಹೋರಾಟದ ಕಿಚ್ಚು ಹತ್ತಿಸಿದವರು ಬಾಲಗಂಗಾಧರ ತಿಲಕರು, ಬ್ರಿಟೀಷರ ದಾಸ್ಯದಿಂದ ಮುಕ್ತಿ ನೀಡಲು ಹಲವಾರು ಮಹನೀಯರು ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ ಅವರೆಲ್ಲರನ್ನು ಸದಾಕಾಲ ಸ್ಮರಿಸಬೇಕಿದೆ ಎಂದು ಹೇಳಿದರು.
ಡಾ.ಮುರಳೀಧರ್ ಆರೋಗ್ಯದ ಕುರಿತು ಮಾತನಾಡಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪೌಷ್ಟಿಕಾಂಶ ಆಹಾರ ಸೇವನೆ ಮಾಡಬೇಕು, ಕೋಪ, ಉದ್ವೇಗಗಳನ್ನು ಕಡಿಮೆಗೊಳಿಸಿ ಮಾನಸಿಕ ಸ್ಥಿಮಿತತೆ ಕಂಡುಕೊಳ್ಳಬೇಕು ಎಂದರು.
ಯೋಗಶಿಕ್ಷಕ ಸುರೇಂದ್ರ ನಿರಂತರವಾಗಿ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ. ಸದೃಢ ಆರೋಗ್ಯ ಹಣ್ಣು, ಹಸಿರು ತರಕಾರಿಗಳ ಸೇವನೆ ಅತ್ಯಂತ ಒಳ್ಳೆಯದು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಯೋಗಶಿಕ್ಷಕ ಶಿವಪ್ಪ, ಐಡಿಎಸ್ಜಿ ಕಾಲೇಜಿನ ಉಪನ್ಯಾಸಕ ಸೋಮಶೇಖರ್, ಶ್ರೀನಿವಾಸ್, ಸೇರಿದಂತೆ ಮತ್ತಿತರರು ಇದ್ದರು.

























Discussion about this post