ಚಿಕ್ಕಮಗಳೂರು: ನಗರದ ಆಜಾದ್ಪಾರ್ಕ್ನಲ್ಲಿ ವಿವಿಧ ಪಕ್ಷ ಹಾಗೂ ರೈತ ಸಂಘಟನೆಗಳು ಉತ್ತರ ಪ್ರದೇಶದಲ್ಲಿ ಲಖೀಂಪುರದಲ್ಲಿ ರೈತರ ಮೇಲೆ ನಡೆದ ಅಮಾನುಷ ಕೃತ್ಯ ಖಂಡಿಸಿ ಪ್ರತಿಕೃತಿಗಳನ್ನು ಇಟ್ಟು ಸರ್ಕಾರದ ವಿರುದ್ದ ಧಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದರು.
ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಹೆಚ್.ಹೆಚ್.ದೇವರಾಜ್ ಮಾತನಾಡಿ ದೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೈತರ, ಕಾರ್ಮಿಕರ, ಜನಸಾಮಾನ್ಯರ ವಿರೋಧಿಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ದವಾಗಿ ಆಡಳಿತ ನಡೆಸುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂವಿಧಾನಾತ್ಮಕವಾಗಿ ಹೋರಾಟ ನಡೆಸುತ್ತಿದ್ದಾಗ ಕೇಂದ್ರದ ಸಚಿವನೊಬ್ಬನ ಮಗ ರೈತರ ಮೇಲೆ ವಾಹನ ಚಲಾಯಿಸಿ ಹತ್ಯೆ ಮಾಡುವ ಮೂಲಕ ಅಮಾನುಷ ಕೃತ್ಯ ಎಸಗಿದ್ದು ಉತ್ತರ ಪ್ರದೇಶ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಪುತ್ರನನ್ನು ಬಂಧಿಸಬೇಕು. ಜತೆಗೆ ಆಡಳಿತ ವೈಫಲ್ಯ ಕಂಡಿರುವ ಉತ್ತರ ಪ್ರದೇಶದ ಸರ್ಕಾರವನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿದರು.
ಲಖಿಂಪುರ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣಹೋಮ ನಿಜಕ್ಕೂ ಖಂಡನೀಯ. ಬೆಂಗಾವಲು ವಾಹನ ಹರಿಸಿ ರೈತರನ್ನು ಹತ್ಯೆಗೈದು ಹಲವಾರು ರೈತರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಇಂಥ ದು?ತ್ಯ ಹಿಂದೆಂದೂ ನಡೆದಿರಲಿಲ್ಲ. ಈ ಕೃತ್ಯಕ್ಕೆ ಕಾರಣರಾದವರ ಮೇಲೆ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದರು.
ಭಾರತದ ಕೃಷಿಗೆ ಮಾರಣಾಂತಿಕವಾಗಿರುವ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ರೈತರು ಕಳೆದ ಒಂದು ವ?ದಿಂದ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ದೆಹಲಿ ಗಡಿಯಲ್ಲಿ ೫೦೦ ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಹಿಂದುತ್ವ ಎಂದು ಪ್ರತಿಪಾದಿಸುವ ಬಿಜೆಪಿ ಸರ್ಕಾರ ಇದೀಗ ಅವರ ಕಗ್ಗೊಲೆಗೆ ಕಾರಣವಾಗಿದೆ. ಇಂತಹ ಗಂಭೀರ ಪ್ರಕರಣದ ಸಂದರ್ಭ ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾ?ಪತಿಗಳು ಮಧ್ಯ ಪ್ರವೇಶಿಸಬೇಕಿದೆ. ದೇಶದ ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ತುರ್ತು ಅಗತ್ಯವಾಗಿದೆ. ಜತೆಗೆ ಅಲ್ಲಿನ ಆಡಳಿತ ಸರ್ಕಾರವನ್ನು ಕೂಡಲೇ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ ರಾಧಾಕೃಷ್ಣ, ಸಿಪಿಐ ಮುಖಂಡ ಅಮ್ಜದ್, ರೇಣುಕಾರಾಧ್ಯ, ಸೇರಿದಂತೆ ರೈತ ಮುಖಂಡು ಉಪಸ್ಥಿತರಿದ್ದರು.

























Discussion about this post