ಚಿಕ್ಕಮಗಳೂರು: ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅ.8ರಂದು ಭೇಟಿ ನೀಡಲಿರುವ ಕಾರಣ ಅಂದು ಶೃಂಗೇರಿಯ ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಅಕ್ಟೋಬರ್ 8ರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ರಾಷ್ಟ್ರಪತಿಗಳ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಲಿದೆ. ಶಾರದಾಂಬೆ ದರ್ಶನದ ಜತೆಗೆ ಉಭಯ ಶ್ರೀಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಮಾಡಲಿದ್ದಾರೆ.
ನಾಲ್ಕು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅ.8ರಂದು ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅ. 9ರಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ರಾಮನಾಥ್ ಕೋವಿಂದ್ ದೆಹಲಿಗೆ ತೆರಳಲಿದ್ದಾರೆ.
ಶೃಂಗೇರಿಗೆ ಭೇಟಿ ನೀಡಲಿರುವ ರಾಷ್ಟ್ರಪತಿಗಳು ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶೃಂಗೇರಿಯಲ್ಲಿ ಹೆಲಿಕಾಪ್ಟರ್ ಇಳಿಯುವುದಕ್ಕಾಗಿ ಹೆಲಿಪ್ಯಾಡ್‌ಗಳ ನಿರ್ಮಾಣ ಮಾಡಲಾಗಿದೆ. ಗಾಂಧಿ ಮೈದಾನದಲ್ಲಿದ್ದ ಅಂಗಡಿ ಮುಂಗಟ್ಟುಗಳು, ಹೋಟೆಲ್, ರಸ್ತೆ ಬದಿ ವ್ಯಾಪಾರದ 25ಕ್ಕೂ ಹೆಚ್ಚು ಅಂಗಡಿಗಳ ತೆರವು ಮಾಡಲಾಗಿದೆ.

























Discussion about this post