ಚಿಕ್ಕಮಗಳೂರು: ದತ್ತಪೀಠದಲ್ಲಿ ದರ್ಗಾಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಶಾಂತಿ, ಸುವ್ಯವಸ್ಥೆ ಕದಡುವ, ಹೇಳಿಕೆ ಬದಲು ನ್ಯಾಯ ಸಮ್ಮತವಾದ ದೃಷ್ಟಿಕೋನದಿಂದ ಅರಿತು ಮಾತನಾಡಲಿ ಎಂದು ಇಂಧನ ಸಚಿವ ಸುನೀಲ್ಕುಮಾರ್ಗೆ ಕೆಪಿಸಿಸಿ ಕಿಸಾನ್ ಸೆಲ್ನ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದತ್ತಪೀಠ ವಿಚಾರಗಳಿಂದ ರಾಜ್ಯದ ಮಂತ್ರಿಯಾಗಿರುವ ಸುನೀಲ್ಕುಮಾರ್ ಅವರು ೪೦೦ ವರ್ಷಗಳ ಇತಿಹಾಸ ಹೊಂದಿರುವ ಬಾಬಾ ಬುಡನ್ಗಿರಿ ದರ್ಗಾಗಳನ್ನು ಸ್ಥಳಾಂತರ ಮಾಡಿ ಎಂದು ಶಾಂತಿ ಕದಡುವ ಹೇಳಿಕೆ ನೀಡಿರುವುದು ಖಂಡನೀಯ. ಅದು ಎಂದಿಗೂ ಸಾಧ್ಯವಿಲ್ಲ ತಮ್ಮದೇ ಸರ್ಕಾರವಿದೆ ಎಂದು ಕಾನೂನನ್ನು ದುರುಪಯೋಗ ಮಾಡಿಕೊಳ್ಳದೇ ಸೂಕ್ತವಾದ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳಲಿ ಎಂದು ಒತ್ತಾಯಿಸಿದರು.
ನ್ಯಾಯಾಲಯವು ಸರ್ಕಾರಕ್ಕೆ ಸಮಿತಿ ರಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ತಿಳಿಸಿದೆ. ೪೦೦ ರಿಂದ ೫೦೦ ವರ್ಷಗಳಿಂದಲೂ ಇಲ್ಲಿ ಹಿಂದೂಗಳ ಭಾವನೆಗಳಿಗೂ ಧಕ್ಕೆಯಾಗದಂತೆ ನಡೆದುಕೊಂಡು ಬರಲಾಗುತ್ತಿದೆ. ಮುಜಾವರ್ಗಳ ನೇಮಕ ರದ್ದುಪಡಿಸಿದೆ ಈ ಬಗ್ಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಹೋರಾಟ ನಡೆಸುವುದಾಗಿ ತಿಳಿಸಿದರು.
ಸರ್ವರಿಗೂ ಸಮಪಾಲು ಎಂಬ ದೃಷ್ಟಿಯಲ್ಲಿ ಸಮಸ್ಯೆ ಬಗೆಹರಿಯಬೇಕು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಬದ್ದವಾಗಿರಬೇಕು. ಶಾಂತಿ, ಸುವ್ಯವಸ್ಥೆಯನ್ನು ಕದಡುವ ಹೇಳಿಕೆ ನೀಡದಂತೆ ಅವರಲ್ಲಿ ಮನವಿ ಮಾಡಿದರು.
ಕುಂದಾಪುರದಲ್ಲಿ ಭಜರಂಗದಳದ ನಾಯಕಿ ಚೈತ್ರಾ ಅನ್ಯಕೋಮಿನ ವಿರುದ್ದ ಸಾರ್ವಜನಿಕ ಸ್ಥಳದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು ಮದುವೆ ವಿಚಾರ ಆ ಸಮುದಾಯಕ್ಕೆ ಬಿಟ್ಟ ವಿಚಾರ ಅದನ್ನು ಉಲ್ಲೇಖಿಸಿ ಮಾತನಾಡುವ ಅಗತ್ಯವೆನಿದೆ ಎಂದು ಆಕ್ರೋಶ ಹೊರಹಾಕಿದರು.
ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವರ ಪುತ್ರ ರೈತರ ಮೇಲೆ ಕಾರು ಚಲಾಯಿಸಿ ಹತ್ಯೆ ಮಾಡಿರುವುದು ಖಂಡನೀಯ ಕೂಡಲೇ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು, ಕೇಂದ್ರ ಸಚಿವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಜತೆಗೆ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಆಗ್ರಹಿಸಿದರು.
ನಗರದಲ್ಲಿ ರಸ್ತೆ, ಚರಂಡಿ ಸೇರಿದಂತೆ ಬಹುತೇಕ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳು ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ, ಬಸವನಹಳ್ಳಿ ಕೆರೆಯ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅಕ್ರಮವಾಗಿ ತೆರವು ಮಾಡಿ ವರ್ಷಗಳೇ ಉರುಳಿತ್ತಿವೆ ಈ ಬಗ್ಗೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

























Discussion about this post