• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಸಭಾಧ್ಯಕ್ಷರ ನಿರ್ಣಯಗಳು ಪಕ್ಷಾತೀತವಾಗಿರಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ

ಮೋದಿ ಜನರ ಜೇಬಿಗೆ ಕೈಹಾಕಿ ದರೋಡೆಗಿಳಿದಿದ್ದಾರೆ

Shri News Desk by Shri News Desk
Sep 25, 2021, 06:47 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು : ಸಭಾಧ್ಯಕ್ಷರ ಹುದ್ದೆ ರಾಜಕಿಯ ಮತ್ತು ಪಕ್ಷಗಳನ್ನು ಮೀರಿದ ಹುದ್ದೆ. ಅವರ ನಿರ್ಣಯಗಳು ಯಾವಾಗಲೂ ಪಕ್ಷಾತೀತವಾಗಿರಬೇಕು. ಸಭಾಧ್ಯಕ್ಷರು ಒಂದು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸುವುದಾದರೆ ಆ ಹುದ್ದೆಗೆ ಮಹತ್ವವೇನಿದೆ? ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದಾರೆ ಎಂಬ ನನ್ನ ನಂಬಿಕೆ ಹುಸಿಯಾಗಿದೆ. ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರ ಆರ್.ಎಸ್.ಎಸ್ ನವರ ನಿರ್ದೇಶನದಲ್ಲಿ ಮುಖವಾಡ ಧರಿಸಿ, ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದೇ ವೇಳೆ ವಿಧಾನಸಭೆ ಕಲಾಪವನ್ನು ಸಭಾಧ್ಯಕ್ಷರು ಅನಿರ್ಧಿಷ್ಟ ಅವಧಿಗೆ ಮುಂದೂಡಿದ ಬಳಿಕ ಸಿದ್ದರಾಮಯ್ಯ ಅವರು ಮೊಗಸಾಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಸರ್ಕಾರದ ನಿರ್ದೇಶನದ ಮೇರೆಗೆ ಸಭಾಧ್ಯಕ್ಷರು ಕಲಾಪವನ್ನು ಅನಿರ್ಧಿಷ್ಟ ಅವಧಿಗೆ ಮುಂದೂಡಿದ್ದಾರೆ. ಆರು ತಿಂಗಳ ಬಳಿಕ ಅಧಿವೇಶನ ನಡೆಯುತ್ತಿದೆ. ಚರ್ಚಿಸಲು ಸಾಕಷ್ಟು ವಿಷಯಗಳಿವೆ. ಸರ್ಕಾರದ ಗಮನ ಸೆಳೆಯಬೇಕಾದ ಸಮಸ್ಯೆಗಳಿವೆ, ಹಾಗಾಗಿ ಕನಿಷ್ಟ ಇಪ್ಪತ್ತು ದಿನ ಸದನ ನಡೆಸಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಹೇಳಿದ್ದೆ. ಸಭಾಧ್ಯಕ್ಷರು ಇನ್ನೊಂದು ಸಭೆ ಕರೆದಾಗ ಈ ಬಗ್ಗೆ ತೀರ್ಮಾನ ಮಾಡೋಣ ಎಂಬ ಭರವಸೆ ನೀಡಿದ್ದರು. ಆದರೆ ಈ ವಾರ ಸಭೆ ಕರೆಯಲೇ ಇಲ್ಲ, ಇನ್ನು ಐದು ದಿನವಾದರೂ ಸದನ ಮುಂದುವರೆಸುವಂತೆ ಆಗ ಸಭಾಧ್ಯಕ್ಷರಿಗೆ ಪತ್ರ ಬರೆದೆ. ಅದಕ್ಕವರ ಸರ್ಕಾರ ಸಿದ್ಧವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಚರ್ಚೆಗೆ ನಾನು ಅವಕಾಶ ಕೇಳಿದ್ದೆ. ಸಮಯ ಇಲ್ಲ ಎಂದು ಅವಕಾಶವನ್ನೇ ನೀಡಿಲ್ಲ. ಇನ್ನು ರಾಜ್ಯದ ಆರ್ಥಿಕ ಪರಿಸ್ಥಿತಿ ತೀರ ಕೆಟ್ಟದಾಗಿದೆ, ಹೀಗೆ ಅನೇಕ ವಿಚಾರಗಳ ಬಗ್ಗೆಯೂ ಚರ್ಚೆ ಮಾಡಬೇಕಿತ್ತು. ಸದನ ಮುಂದುವರೆಸಿದ್ದರೆ ಈ ಎಲ್ಲಾ ವಿಷಯಗಳ ಮೇಲೆ ಚರ್ಚಿಸಬಹುದಿತ್ತು. ಈ ವರೆಗೆ ಸದನದಲ್ಲಿ ಪ್ರಸ್ತಾಪಿಸಿದ ವಿಷಯಗಳ ಬಗ್ಗೆಯಾದರೂ ಸರ್ಕಾರ ಸಕಾರಾತ್ಮಕವಾಗಿ ಉತ್ತರ ನೀಡಿದೆಯೇ, ಅದೂ ಇಲ್ಲ. ಸದನದಲ್ಲಿ ಧರಣಿ, ಪ್ರತಿಭಟನೆ ಮಾಡದೆ ಜನರ ಸಮಸ್ಯೆಗಳ ಚರ್ಚೆಗೆ ಹೆಚ್ಚು ಸಮಯ ಸಿಗಲಿ ಎಂದು ಶಾಸಕಾಂಗ ಸಭೆಯಲ್ಲಿ ನಿರ್ಧರಿಸಿದ್ದೆವು. ಯಾವಾಗ ಸದನ ಮುಂದುವರೆಸಲು ಆಗುವುದೇ ಇಲ್ಲ ಎಂದು ಹೇಳಿದರೋ ಆಗ ಅನಿವಾರ್ಯವಾಗಿ ಧರಣಿ ಮಾಡಬೇಕಾಯಿತು ಎಂದವರು ಅಭಿಪ್ರಾಯ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕೇಂದ್ರ ಸರ್ಕಾರ ಶೋಷಿತರು, ದಲಿತರು, ಮಹಿಳೆಯರನ್ನು ಸಂಘ ಪರಿವಾರದ, ಮೇಲ್ವರ್ಗದ ಜನರ ಗುಲಾಮರನ್ನಾಗಿಸಲು ಹೊರಟಿದೆ. ಇದನ್ನು ಸದನದಲ್ಲಿ ವಿರೋಧ ಮಾಡಿದರೆ ಸಭಾಧ್ಯಕ್ಷರೇ ಸಮರ್ಥನೆಗೆ ಇಳಿಯುತ್ತಾರೆ ಎಂದು ಟೀಕಿಸಿದರು.

ಕೆಐಎಡಿಬಿ ಅಧೀನದಲ್ಲಿರುವ ಸುಮಾರು 400 ಕೋಟಿ ಮೌಲ್ಯದ 116 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಎಂಬ ಆರ್.ಎಸ್.ಎಸ್ ನವರನ್ನು ಒಳಗೊಂಡ ಸಂಸ್ಥೆಗೆ ಮಾರಲು ನಿರ್ಧರಿಸಿದೆ. ಇದನ್ನು ಪ್ರಶ್ನಿಸಿದರೆ ಸಭಾಧ್ಯಕ್ಷರು ಸರ್ಕಾರದ ಕೈಗೊಂಬೆಯಂತೆ ವರ್ತಿಸ್ತಾರೆ ಎಂದು ಲೇವಡಿ ಮಾಡಿದರು.

ಕೊರೊನಾದಿಂದ ಸತ್ತವರ ಲೆಕ್ಕದಲ್ಲೂ ಸರ್ಕಾರ ಸುಳ್ಳು ಹೇಳಿದೆ. ಹಿಂದಿನ ಮುಖ್ಯಮಂತ್ರಿ ಮೃತರ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲು ಮೂನ್ನೂರು ಕೋಟಿ ಘೋಷಣೆ ಮಾಡಿದ್ದರು. ಅವರು ಅಧಿಕಾರದಿಂದ ಇಳಿದು ಎರಡು ತಿಂಗಳಾಯಿತು. ಇನ್ನೂ ಒಂದು ಪೈಸೆ ಪರಿಹಾರ ಕೊಟ್ಟಿಲ್ಲ. ಶ್ರೀರಾಮುಲು ಪರಿಹಾರ ಕೊಟ್ಟಿದ್ದೀವಿ ಎಂದು ಹೇಳಿ ಸಿಕ್ಕಿಬಿದ್ದರು, ಕೊನೆಗೆ ಯಡಿಯೂರಪ್ಪ ಅವರೇ ಪರಿಹಾರ ಕೊಟ್ಟಿಲ್ಲ ಎಂದು ಸಮಜಾಯಿಷಿ ಹೇಳಿದರು ಎಂದ ಅವರು ತಿಳಿಸಿದರು.

ಲೋಕಸಭೆಯ ಸಭಾಧ್ಯಕ್ಷರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಸಂವಿಧಾನದಲ್ಲಿ ಅವಕಾಶ ಇಲ್ಲ. ದೇಶದ 75 ವರ್ಷಗಳ ಇತಿಹಾಸದಲ್ಲಿ, ವಿಧಾನಸೌಧ ಸ್ಥಾಪನೆಯಾಗಿ ಕಾರ್ಯಾರಂಭ ಮಾಡಿದ ದಿನದಿಂದ ಇವತ್ತಿನವರೆಗೆ ಲೋಕಸಭಾ ಸಭಾಧ್ಯಕ್ಷರು ವಿಧಾನಮಂಡಲದ ಜಂಟಿ ಅಧಿವೇಶನ ಕುರಿತು ಭಾಷಣ ಮಾಡಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.

ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ನಾವು ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿಯಲ್ಲಿ ಅಧಿವೇಶನಕ್ಕೆ ಆಗಮಿಸುವ ಮೂಲಕ ಪ್ರತಿಭಟನೆ ನಡೆಸಿದ್ದೇವೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್, ಆಸ್ಪತ್ರೆ ಬಿಲ್, ದಿನಸಿ ಪದಾರ್ಥ, ಬಸ್ ದರ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳು ಹಾಗೂ ಸೇವೆಗಳ ಬೆಲೆ ಗಗನಕ್ಕೇರಿ, ಜನಸಾಮಾನ್ಯರು ಪರದಾಡುವಂತಾಗಿದೆ.
ಒಂದು ಮಧ್ಯಮ ವರ್ಗದ ಕುಟುಂಬದ ಜೀವನ ನಿರ್ವಹಣೆಯ ವೆಚ್ಚ ಇಂದು ದುಪ್ಪಟ್ಟಾಗಿದೆ, ಆದರೆ ಸಂಬಳ, ಪಿಂಚಣಿ, ಕೂಲಿ ಇವೆಲ್ಲವೂ ಹಿಂದಿನಷ್ಟೇ ಇದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ದೇಹದಲ್ಲಿ ರಕ್ತಕ್ಕೆಷ್ಟು ಮಹತ್ವದ ಪಾತ್ರವಿದೆಯೋ, ಜನರ ಬದುಕಿನಲ್ಲಿ ಡೀಸೆಲ್ ಗೂ ಅಷ್ಟೇ ಮಹತ್ವವಿದೆ. ಹಿಂದೆ ಯು.ಪಿ.ಎ ಸರ್ಕಾರವಿದ್ದಾಗ ಡೀಸೆಲ್ ದರ ರೂ. 47 ಇತ್ತು, ಇಂದು ರೂ. 96 ಆಗಿದೆ. ಡೀಸೆಲ್ ಬೆಲೆಯೇರಿಕೆಯಿಂದ ಉಳಿದೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಬಾರದು ಎಂಬ ಕಾರಣಕ್ಕೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಡೀಸೆಲ್ ಬೆಲೆ ರೂ. 50 ರ ಗಡಿ ದಾಟದಂತೆ ನೋಡಿಕೊಂಡಿದ್ದರು. ನರೇಂದ್ರ ಮೋದಿ ಸರ್ಕಾರ ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿದ್ದೇ ಇಂದಿನ ಬೆಲೆಯೇರಿಕೆಗೆ ನೇರ ಕಾರಣ ಎಂದು ಸಿದ್ದರಾಮಯ್ಯ ಆಪಾದಿಸಿದರು.

ಅಚ್ಚೇ ದಿನದ ಆಸೆ ತೋರಿಸಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಜನರ ಜೇಬಿಗೆ ಕೈ ಹಾಕಿ, ದರೋಡೆಗಿಳಿದಿದ್ದಾರೆ. ಇದರಿಂದ ಜನ ತಮ್ಮ ಮನೆಯಲ್ಲಿದ್ದ ಬಂಗಾರವನ್ನೆಲ್ಲಾ ಅಡವಿಟ್ಟು ಜೀವನ ಸಾಗಿಸುವಂತಾಗಿದೆ. ಕೊರೊನಾ ಆರಂಭವಾದ ನಂತರ ಸುಮಾರು ರೂ. 4 ಲಕ್ಷದ 17 ಸಾವಿರ ಕೋಟಿ ಬೆಲೆಬಾಳುವ 1500 ಮೆಟ್ರಿಕ್ ಟನ್ ಬಂಗಾರವನ್ನು ಮುತ್ತೂಟ್ ಮತ್ತು ಮಣಪ್ಪುರಂನಲ್ಲಿ ಅಡವಿಟ್ಟಿದ್ದಾರೆ. ಇಂತಹಾ ಸ್ಥಿತಿಗೆ ದೇಶವನ್ನು ಮೋದಿ ಸರ್ಕಾರ ತಂದು ನಿಲ್ಲಿಸಿದೆ. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿಮೆ ಮಾಡಿ ಕಾರ್ಪೊರೇಟ್ ಉದ್ದಿಮೆಗಳ ಮೇಲೆ ತೆರಿಗೆ ಹೆಚ್ಚು ಮಾಡಬೇಕಿತ್ತು. ಆದರೆ ಮೋದಿ ಸರ್ಕಾರ ಬಂಡವಾಳಶಾಹಿಗಳು, ಉದ್ದಿಮೆದಾರರು, ಕಾರ್ಪೊರೇಟ್ ಕಂಪನಿಗಳ ಪರವಾಗಿದ್ದಾರೆ ಎಂದು ಮೋದ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಪಕ್ಷ ಬಡವರು, ಮಹಿಳೆಯರು, ಆಟೋ, ಕ್ಯಾಬ್ ಚಾಲಕರು, ದಿನಗೂಲಿ ನೌಕರರು, ಕಾರ್ಮಿಕರ ಪರವಾಗಿ ಇದೆ. ಈ ಕಾರಣಕ್ಕಾಗಿಯೇ ನಾವು ಇಂದು ಜನರ ದನಿಯಾಗಿ ಹೋರಾಟಕ್ಕಿಳಿದಿದ್ದೇವೆ. ಸರ್ಕಾರದ ವಿರುದ್ಧ ಮಾತನಾಡುವವರ ಮೇಲೆ ಸುಳ್ಳು ಕ್ರಿಮಿನಲ್ ಕೇಸ್, ದೇಶದ್ರೋಹದ ಆರೋಪ ಹೊರಿಸಿ ಬಂಧಿಸುತ್ತಾರೆ. ಬಿಜೆಪಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳಿಗಾಗಲೀ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಲೀ ಬೆಲೆಯೇ ಇಲ್ಲ. ಇಂಥಾ ಕ್ರೂರ ಸರ್ಕಾರವನ್ನು ನನ್ನ 45 ವರ್ಷಗಳ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ. ಕಳೆದ ಏಳು ವರ್ಷಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವೊಂದರಲ್ಲೇ ಕೇಂದ್ರ ಸರ್ಕಾರ ರೂ. 23 ಲಕ್ಷ ಕೋಟಿ ತೆರಿಗೆ ಹಣ ಸಂಗ್ರಹಿಸಿದೆ. ಇದನ್ನು ಕ್ರಿಮಿನಲ್ ಲೂಟ್ ಅಂದರೆ ತಪ್ಪೇನಿದೆ?ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತ ಹೋರಾಟವನ್ನು “ಪ್ರಾಯೋಜಿತ ಚಳವಳಿ” ಎಂದು ಕರೆದು ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹೋರಾಟವನ್ನೇ ಮಾಡದೆ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದವರಿಗೆ ಹೋರಾಟದ ಬೆಲೆ ಗೊತ್ತೇ? ಪಕ್ಕದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು 3 ರೂಪಾಯಿ ಕಡಿತ ಮಾಡಿದರು. ರಾಜ್ಯ ಸರ್ಕಾರಕ್ಕೆ ನಿಜವಾಗಿ ಬಡವರ, ರೈತರ ಮೇಲೆ ಕಾಳಜಿ ಇದ್ದರೆ ಪೆಟ್ರೋಲ್, ಡೀಸೆಲ್ ಮೇಲೆ ರೂ. ೧೦ ತೆರಿಗೆ ಕಡಿತ ಮಾಡಲಿ ಎಂದು ಸವಾಲು ಹಾಕಿದರು ಸಿದ್ದರಾಮಯ್ಯ.

ಈ ಸರ್ಕಾರದ ಜೊತೆ ಅಧಿವೇಶನದಲ್ಲಿ ಎಷ್ಟೇ ಗುದ್ದಾಡಿದರೂ ಇವರು ಯಾವುದಕ್ಕೂ ತಲೆಕೆಡಿಸಿಕೊಳ್ಳದಷ್ಟು ಭಂಡಗೆಟ್ಟಿದ್ದಾರೆ. ನಮ್ಮ ಪಕ್ಷವೇ ಇಂದು ಅಧಿಕಾರದಲ್ಲಿ ಇದ್ದಿದ್ದರೆ ಕನಿಷ್ಟ ೧೦ ರೂಪಾಯಿ ತೆರಿಗೆ ಕಡಿತ ಮಾಡುತ್ತಿದ್ದೆವು. ಅಕ್ಟೋಬರ್ ೨ರ ಗಾಂಧಿಜಯಂತಿಯಂದು ಬೆಲೆಯೇರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಆರಂಭಿಸಿ, ಬೆಲೆ ಇಳಿಕೆಯಾಗುವವರೆಗೂ ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ಪ್ರತಿಭಟನೆ ಸ್ವರೂಪ ತೀವ್ರಗೊಳಿಸುವುದಾಗಿ ತಿಳಿಸಿದ

Tags: Opposition leader Siddaramaiah
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In