ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿಯವರ ೧೫೨ ನೇ ಜನ್ಮ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೧೭ ನೇ ಜನ್ಮ ಜಯಂತಿಯನ್ನು ಸರ್ವಧರ್ಮಗಳ ಶ್ಲೋಕಗಳನ್ನು ಪಠಿಸುವ ಮೂಲಕ ಶನಿವಾರ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಕಛೇರಿ ಆವರಣದ ನೆನಪಿನಂಗಳದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಸಿ.ಟಿ ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೆಗೌಡ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.
ಗಾಂಧಿ ಜಯಂತಿ ಸಮಾರಂಭ ರೇಖಾಪ್ರೇಂಕುಮಾರ್ ಮತ್ತು ತಂಡದ ಗಾಯನದೊಂದಿಗೆ ಆರಂಭಗೊಂಡಿತು. ಟೌನ್ಮಹಿಳಾ ಸಮಾಜದ ವಿದ್ಯಾರ್ಥಿಗಳು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕಿ ನಾಗಶ್ರೀ ಭಗವಾದ್ಗೀತೆಯನ್ನು ಪಠಿಸಿದರೆ, ಮೌಲ್ವಿ ಔರಂಗ್ಪಾಷಹಜರತ್ ಖುರಾನನ್ನು, ಫಾದರ್ ವಿನಯ್ಕುಮಾರ್ ಬೈಬಲ್ ಪಠಿಣಮಾಡಿದರು.
ಮಹಾತ್ಮ ಗಾಂಧೀಜಿ ಮತ್ತು ಲಾಲ್ಬಹದ್ದೂರ್ಶಾಸ್ತ್ರೀಯವರ ಜನ್ಮದಿನದ ಅಂಗವಾಗಿ ತಳಿರುತೋರಣಗಳಿಂದ ಜಿಲ್ಲಾಧಿಕಾರಿ ಕಚೇರಿಯನ್ನು ಅಲಂಕರಿಸಲಾಗಿತ್ತು. ಸರಳ ಮತ್ತು ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್, ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್, ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪ,ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ನೆಹರುಯುವಕೇಂದ್ರ ಯುವಜನ ಸಮನ್ವಯಾಧಿಕಾರಿ ಚವ್ಹಾಣ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಮಂಜುಳ ಹುಲ್ಲಳ್ಳಿ ಇದ್ದರು.
ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದ ಅಮೃತ ಅಂಗಳವನ್ನು ಅನಾವರಣಗೊಳಿಸಲಾಯಿತು. ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್, ಶಾಸಕ ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಉದ್ಘಾಟಿಸಿದರು.

























Discussion about this post