ಚಿಕ್ಕಮಗಳೂರು: ಪ್ರತಿಯೊಂದು ಮಗುವಿಗೂ ಶಿಕ್ಷಣಕ್ಕೆ ಹೆಚ್ಚಿನ ಪ್ರ್ರಾಮುಖ್ಯತೆಯನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಮಾಡಲು ಶ್ರಮವಹಿಸಬೇಕು ಎಂದು ಮೈಲಿಮನೆ ಪದವಿಪೂರ್ವ ಕಾಲೇಜು ಉಪನ್ಯಾಸಕ ಅಶೋಕ್ ಕಿವಿಮಾತು ಹೇಳಿದರು.
ನಗರದ ಸವಿತಾ ಸಮಾಜದ ಭವನದಲ್ಲಿ ಸವಿತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ ೨೧ ನೇ ವರ್ಷದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ತೇರ್ಗಡೆಯಾಗಿರುವ ಸಮಾಜದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸವಿತಾ ಸಮಾಜದ ಏಳಿಗೆಗೆ ಪ್ರಮುಖ ಅಸ್ತ್ರ ಶಿಕ್ಷಣ. ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜತೆಗೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಮಾಡಲು ಶ್ರಮವಹಿಸಬೇಕು. ಸಮಾಜವು ತಳಮಟ್ಟದಿಂದ ಸಂಘಟನೆಗೊಳ್ಳಬೇಕು. ಸವಿತಾ ಸಮಾಜದ ಅಭಿಮಾನ ಹೊಂದಿದಾಗ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯವಾಗಲಿದೆ. ಜನನದಿಂದ ಮರಣದವರೆಗೂ ನಮ್ಮ ಸಮಾಜ ಎಲ್ಲಾ ವರ್ಗದವರಿಗೂ ಅವಶ್ಯಕತೆ ಇದೆ. ನಮ್ಮ ಸಮಾಜದಲ್ಲಿರುವ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಕೆಲಸವಾಗಬೇಕು. ಅಲ್ಲದೇ, ಆ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಇಂತಹ ಕಾರ್ಯಕ್ರಮಗಳು ಸ್ಪೂರ್ತಿ ನೀಡಲಿವೆ ಎಂದರು.
ಸವಿತಾ ಸಮಾಜ ಸೇವಾ ಟ್ರಸ್ಟ್ನ ಅಧ್ಯಕ್ಷ ಶ್ರೀಧರ್ ಮಾತನಾಡಿ ಕಾಯಕದೊಂದಿಗೆ ಮಕ್ಕಳಿಗೆ ಶಿಕ್ಷಣ ದೊರಕಿಸುವ ಮೂಲಕ ಸವಿತ ಸಮಾಜವನ್ನು ಮುಖ್ಯವಾನಿಗೆ ತರಲು ಸಮಾಜದ ಬಂಧುಗಳು ಸಹಕರಿಸಬೇಕು. ಸವಿತಾ ಸಮಾಜ ಇಂದು ಸಮಾಜದ ಮುಖ್ಯ ವಾಹಿನಿಗೆ ಬರಬೇಕಾದರೆ, ಶಿಕ್ಷಣವೇ ಮುಖ್ಯ ಅಸ್ತ್ರವಾಗಿದೆ. ಆದ್ದರಿಂದ ಸಮಾಜದ ಪೋ?ಕರು ಮಕ್ಕಳನ್ನು ಕುಲ ಕಸುಬಿಗೆ ಸೀಮಿತ ಮಾಡದೇ, ಒಳ್ಳೆಯ ಶಿಕ್ಷಣ ಕೊಡಿಸಬೇಕಾದ ಅವಶ್ಯಕತೆ ಇದೆ ಎಂದರು.ಹಿಂದೆ ವಿದ್ಯೆ ಕೇವಲ ಮೇಲ್ವರ್ಗಕ್ಕೆ ಸೀಮಿತವಾಗಿತ್ತು. ಶೋಷಿತರು, ದಲಿತರು, ಅಲ್ಪಸಂಖ್ಯಾತರು ಹಿಂದೆ ಋಷಿಮುನಿಗಳು ಶಿಕ್ಷಣ ನೀಡುತ್ತಿದ್ದ ಗುರುಕುಲಗಳ ಕಡೆಗೆ ಸುಳಿಯಲು ಸಹ ಅವಕಾಶ ಇರಲಿಲ್ಲ.
ಹೀಗಾಗಿ ನಮ್ಮಂತಹ ತಳ ಸಮುದಾಯಗಳಿಗೆ ಶಿಕ್ಷಣ ಎಂಬುದೇ ಮರಿಚೀಕೆಯಾಗಿತ್ತು. ಆದರೆ, ಕಾಲ ಕ್ರಮೇಣ ಅದರಲ್ಲೂ ಭಾರತ ಸ್ವಾತಂತ್ರ್ಯಗೊಂಡ ಬಳಿಕ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಾಗಿ ಎಲ್ಲರೂ ಅಕ್ಷರ ಕಲಿಯಲು ಸಾಧ್ಯವಾಯಿತು. ಅಲ್ಲದೆ, ಸರ್ಕಾರಗಳು ಸಹ ಪ್ರತಿಯೊಬ್ಬರಿಗೂ ಕಡ್ಡಾಯ ಶಿಕ್ಷಣ ನೀಡಲು ಹಲವು ಯೋಜನೆಗಳನ್ನು ರೂಪಿಸಿದ್ದು, ಇದರ ಸದುಪಯೋಗ ಪಡೆದು ಮಕ್ಕಳು ಅಕ್ಷರಸ್ಥರಾಗಬೇಕೆಂದು ಸಲಹೆ ನೀಡಿದರು.
ನಮ್ಮ ಸಮಾಜದ ಇತಿಹಾಸ, ಪರಂಪರೆ ಅರಿತು ನಮ್ಮಲ್ಲಿ ಬೇರೂರಿರುವ ಅಜ್ಞಾನ, ಕೀಳರಿಮೆಯಿಂದ ಹೊರಬಂದು ಸ್ವಾಭಿಮಾನಿಗಳಾಗಿ ಬದುಕಬೇಕು, ಈ ನಿಟ್ಟಿನಲ್ಲಿ ಸಮುದಾಯದ ಜಾಗೃತಿ ಹಾಗೂ ಸಂಘಟನೆಯ ಅಗತ್ಯವಿದೆ ಎಂದು ತಿಳಿಸಿದರು.
ಸಮುದಾಯ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಸಮುದಾಯದ ಬಂಧುಗಳು ನೆರವು ನೀಡಿದ್ದಾರೆ. ೧ ರಿಂದ ೧೦ ನೇ ತರಗತಿಯ ೭೦ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ, ಹಾಗೂ ಎಸ್.ಎಸ್.ಎಲ್.ಸಿ. ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸವಿತಾ ಸಮಾಜ ಸೇವಾ ಟ್ರಸ್ಟ್ನ ಕಾರ್ಯದರ್ಶಿ ನಾಗರಾಜ್, ಸಹಕಾರ್ಯದರ್ಶಿ ಅಶ್ವಿನ್, ಖಜಾಂಚಿ ಯೋಗೇಶ್, ತಾಲ್ಲೂಕು ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಮತ್ತಿತರರು ಇದ್ದರು.

























Discussion about this post