ಲಕ್ನೋ: ಆಗ್ರಾ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿಯಲ್ಲಿ ಸಿನಿಮಾ ಹಾಡಿಗೆ ನೃತ್ಯ ಮಾಡಿದ 5 ಶಿಕ್ಷಕಿಯರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಲಾಖೆ ಈ ಐವರು ಶಿಕ್ಷಕರನ್ನೂ ಅಮಾನತು ಮಾಡಲಾಗಿದೆ.
ಸದರಿ ವೀಡಿಯೋದಲ್ಲಿರುವ ಶಿಕ್ಷಕಿಯರನ್ನು ರಶ್ಮಿ ಸಿಸೋಡಿಯಾ, ಜೀವಿಕಾ ಕುಮಾರಿ, ಅಂಜಲಿ ಯಾದವ್, ಸುಮನ್ ಕುಮಾರಿ ಮತ್ತು ಸುಧಾ ರಾಣಿ ಎಂದು ಗುರುತಿಸಲಾಗಿದ್ದು, ಜನಪ್ರಿಯ ‘ಮೈನು ಲೆಹೆಂಗಾ ಲೆಡೆ ಮೆಹಂಗಾ’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.
ಈ ವೀಡಿಯೋವನ್ನು ಮಾರ್ಚ್ 21ರಂದು ಸೆರೆ ಹಿಡಿಯಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ನಂತರ ಈ ಕುರಿತಂತೆ ಶಿಕ್ಷಣ ಇಲಾಖೆ ತನಿಖೆ ನಡೆಸಿದೆ.
ಶಿಕ್ಷಣಾಧಿಕಾರಿ(ಬಿಎಸ್ಎ)ಬ್ರಜರಾಜ್ ಸಿಂಗ್ ಅವರು ಮಾಧ್ಯಮಗಳಿಗೆ ಮಾತನಾಡಿ,, ಶಿಕ್ಷಕಿಯರು ನೃತ್ಯ ಮಾಡಿರುವ ಹಾಡು ಅನಕ್ಷರತೆಯನ್ನು ತೋರಿಸುತ್ತದೆ. ತರಗತಿಯಲ್ಲಿ ಶಿಕ್ಷಕಿಯರು ನೃತ್ಯ ಮಾಡುವ ಮೂಲಕ ನಿಯಮವನ್ನು ಉಲ್ಲಂಘಿಸಿದ್ದಾರೆ ಮತ್ತು ಶಿಕ್ಷಣ ಇಲಾಖೆಯ ಪ್ರತಿಷ್ಠೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ. ಜೊತೆಗೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಹೀಗಾಗಿ ಐವರು ಶಿಕ್ಷಕಿಯರನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

























Discussion about this post