ಚಿಕ್ಕಮಗಳೂರು: ಕಾರ್ಮಿಕ ಇಲಾಖೆಗೆ ಸಂಬಂಧಿ ಸಿದ ಸೌಲಭ್ಯಗಳನ್ನು ಅರ್ಹ ಫಲಾನುಭವಿ ಗಳಿಗೆ ತಲುಪಿಸುವ ಹಾಗೂ ಕಾರ್ಮಿಕ ಸಮಸ್ಯೆ ಗಳನ್ನು ಆಲಿಸುವ ನಿಟ್ಟಿನಲ್ಲಿ ಸೆಪ್ಟಂಬರ್ ೧೬ ವರೆಗೆ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಮಿಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಸನದ ಕಾರ್ಮಿಕ ಇಲಾಖೆ ಉಪ ಆಯುಕ್ತ ಸೋಮಣ್ಣ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಮಿಕರ ಸಮಸ್ಯೆ ಪರಿಹರಿಸುವುದು, ವಿವಿಧ ಸೌಲಭ್ಯಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಮತ್ತು ಕೋವಿಡ್ ಪರಿಹಾರ ಧನಕ್ಕಾಗಿ ಸಲ್ಲಿಸಿದ ಅರ್ಜಿ ಶೀಘ್ರದಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೆಪ್ಟೆಂಬರ ೧೬ರವರೆಗೆ ಬೆಳಿಗ್ಗೆ ೧೦.೩೦ರಿಂದ ಸಂಜೆ ೪ಗಂಟೆವರೆಗೆ ಕಾರ್ಮಿಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಮಿಕ ಅದಾಲತ್ ಅಂಗವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಪ್ರಚಾರ ಕೈಗೊಳ್ಳಬೇಕು, ಕಾರ್ಮಿಕರು ತಮ್ಮ ವಿವಿಧ ಅರ್ಜಿಗಳ ವಿಲೇವಾರಿಗಾಗಿ ಕೂಡಲೇ ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಭೇಟಿ ನೀಡಿ ಅರ್ಜಿಗಳ ವಿಲೇವಾರಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ನೆರವು, ಮದುವೆ, ಹೆರಿಗೆ ಹಾಗೂ ವೈದ್ಯಕೀಯ ಧನ ಸಹಾಯ ಸೌಲಭ್ಯ, ಅಪಘಾತ ಪರಿಹಾರ ಸೌಲಭ್ಯ, ಕೋವಿಡ್-೧೯ರ ಎರಡನೇ ಅಲೆಯಲ್ಲಿ ೩ ಹಾಗೂ ೨ಸಾವಿರ ರೂ, ಪರಿಹಾರ ಸಹಾಯಧನಗಳ ಕುರಿತು, ಪಿಂಚಣಿ ಸೌಲಭ್ಯ, ಅಂತ್ಯಸಂಸ್ಕಾರ, ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ ಸೌಲಭ್ಯ, ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ ಸೇರಿದಂತೆ ಇತರೆ ಅರ್ಜಿಗಳಿಗೆ ಸಂಬಂಧಿಸಿದಂತೆ ಕಾರ್ಮಿಕ ಅದಾಲತ್ ನಡೆಯಲಿದೆ ನೋಂದಾಯಿತ ಎಲ್ಲಾ ಕಟ್ಟಡ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಕೋವಿಡ್ ಲಾಕ್ಡೌನ್ ವೇಳೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಜಾಗೃತಿ ಮೂಡಿಸುವುದರ ಆಹಾರದ ಕಿಟ್ ಹಾಗೂ ನೈರ್ಮಲ್ಯ ಕಿಟ್ಗಳನ್ನು ನೀಡಲಾಗಿದೆ. ಕಾರ್ಮಿಕರು ಮತ್ತು ಅವಲಂಬಿತ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗಿದೆ. ಇದುವರೆಗೆ ಕಾರ್ಮಿಕ ಇಲಾಖೆಯಿಂದ ೫೫ ಸಾವಿರ ಮಂದಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ೧೨ ಸಾವಿರ ಮಂದಿ ಅಸಂಘಟಿತ ಕಾರ್ಮಿಕರಿಗೆ ಆಹಾರದ ಕಿಟ್ಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

























Discussion about this post