ಚಿಕ್ಕಮಗಳೂರು: ಸರ್ಕಾರದ ನಿರ್ದೇಶನದಂತೆ ಸೆಪ್ಟೆಂಬರ್ 17ರ ಶುಕ್ರವಾರದಂದು ಜಿಲ್ಲೆಯಲ್ಲಿ ಬೆಳಗ್ಗೆ ೧೦. ಗಂಟೆಯಿಂದ ಸಂಜೆ ೫.೦೦ ಗಂಟೆಯ ವರೆಗೆ ಬೃಹತ್ ಮೆಗಾ ಲಸಿಕಾಕರಣ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.
ನಗರ ಹಾಗೂ ಗ್ರಾಮೀಣ ಭಾಗದ ಪ್ರತೀ ಮನೆ- ಮನೆಗೆ ಭೇಟಿ ನೀಡಿ ಇಲ್ಲಿಯವರೆಗೂ ಲಸಿಕೆ ಪಡೆಯದಿರುವ ೧೮ ವರ್ಷ ಮೇಲ್ಪಟ್ಟ ಎಲ್ಲರನ್ನು ಗುರುತಿಸಿ ಸೆಪ್ಟೆಂಬರ್ ೧೭ ರಂದು ಲಸಿಕಾ ಕೇಂದ್ರಗಳಿಗೆ ಹಾಜರಾಗಿ ಲಸಿಕೆ ಪಡೆಯಬೇಕು.
ಜಿಲ್ಲೆಯಲ್ಲಿ ಅಂದು ಸುಮಾರು ೭೫ ಸಾವಿರ ಸಾರ್ವಜನಿಕರಿಗೆ ಲಸಿಕೆ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ದತೆ ಮಾಡಿಕೊಂಡಿದೆ.
ಲಸಿಕೆಯನ್ನು ಆರೋಗ್ಯ ಕ್ಷೇಮ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರು ತಮ್ಮ ಕಛೇರಿ ಹಾಗೂ ತಾಲ್ಲೂಕು ಕ್ಷೇತ್ರ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಲಸಿಕೆ ಪಡೆಯದಿರುವ ಕುರಿತು ಖಾತ್ರಿ ಪಡಿಸಿಕೊಳ್ಳಬೇಕು, ಅವರನ್ನು ಸೆಪ್ಟೆಂಬರ್ ೧೭ ರಂದು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಬೇಕು.
೧೮ ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲ ಅರ್ಹ ನಾಗರೀಕರು, ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲಾ ನೌಕರರು ತಪ್ಪದೇ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

























Discussion about this post