ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ದಿವಂಗತ ಯು. ಬೂಪತಿ ಅವರ ಸ್ಮರಣಾರ್ಥ ಸ್ಥಾಪಿಸಲಾಗಿರುವ ಟ್ರಸ್ಟ್ ಮೂಲಕ ಈಗಾಗಲೇ ಹತ್ತಾರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ಇದೀಗ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ‘ಸ್ವಾತಂತ್ರ್ಯದ ಪರಿಕಲ್ಪನೆ’ ಮಾತು-ಕವಿತೆ ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಬಿ.ಟಿ.ಲಲಿತಾ ನಾಯಕ್ ನಡೆಸಿಕೊಡಲಿದ್ದು ಕಾರ್ಯಕ್ರಮದ ಅಧ್ಯಕ್ಷತೆ ಪ್ರೊ. ಎಸ್. ಜಿ. ಸಿದ್ದರಾಮಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ಸಿದ್ದನಗೌಡ ಪಾಟೀಲ, ಡಾ. ಅಶೋಕ ನೆರೋಡೆ, ಡಾ. ಸುರೇಶ್ ಸಗರದ, ಸೇರಿದಂತೆ ವಿವಿಧ ಜಿಲ್ಲೆಗಳ ಕವಿಗಳು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷರಾದ ಡಾ. ವಸುಂಧರಾ ಭೂಪತಿ ತಿಳಿಸಿದ್ದಾರೆ.
ಆನ್ ಲೈನ್ ಮುಖಾಂತರ ಭಾಗವಹಿಸಲು ಇಚ್ಛಿಸುವವರು ಕೆಳಗಿನ ಲಿಂಕ್ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಗೂಗಲ್ ಮೀಟ್ ಲಿಂಕ್
meet.google.com/twn-xdda-ydx

























Discussion about this post